HomeLatest NewsBIG NEWS: ಮಹಿಳಾ ಪೊಲೀಸ್ ಅಧಿಕಾರಿಯನ್ನು ನಾಯಿಗೆ ಹೋಲಿಸಿದ ಬಿಜೆಪಿ ಶಾಸಕ: ವರದಿ ಕೇಳಿದ ರಾಜ್ಯ...

BIG NEWS: ಮಹಿಳಾ ಪೊಲೀಸ್ ಅಧಿಕಾರಿಯನ್ನು ನಾಯಿಗೆ ಹೋಲಿಸಿದ ಬಿಜೆಪಿ ಶಾಸಕ: ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ದಾವಣಗೆರೆ: ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿ ಅವಮಾನ ಮಾಡಿದ್ದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ನಡುವೆ ಶಾಸಕರ ಹೇಳಿಕೆ ಖಂಡಿಸಿರಿರುವ ರಾಜ್ಯ ಮಹಿಳಾ ಆಯೋಗ ಶಾಸಕರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಕೇಳಿದೆ.

ಈ ಬಗ್ಗೆ ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗ, ಮಹಿಳಾ ಪೊಲೀಸ್ ಅಧಿಕಾರಿಯನ್ನು ಅವಮಾನ ಮಾಡಿರುವ ಶಾಸಕರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳಾ ಅಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದು ಖಂಡನೀಯ. ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ. ಶಾಸಕರ ವಿರುದ್ಧ ಮಹಿಳಾ ಪೊಲೀಸ್ ಅಧಿಕಾರಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಂಡು ಶೀಘ್ರವಾಗಿ ವರದಿ ನೀಡುವಂತೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular