HomeKarnatakaBig Update: ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ವರ್ಗಾವಣೆ

Big Update: ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ವರ್ಗಾವಣೆ

ಕರ್ನಾಟಕ ಸರ್ಕಾರ ಮಂಗಳವಾರ ಕೆಲವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ದಾವಣಗೆರೆ ಎಸ್‌ಪಿಯಾಗಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.

ಈ ಕುರಿತು ಸಂಜಯ್ ಬಿ.ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-4) ಆದೇಶವನ್ನು ಹೊರಡಿಸಿದ್ದಾರೆ.

ದಾವಣಗೆರೆಯ ನೂತನ ಎಸ್‌ಪಿಯಾಗಿ ಶೇಖರ್ ಹೆಚ್.ತೆಕ್ಕಣ್ಣವರ್ (ಕೆಎನ್;2014) ನೇಮಕ ಮಾಡಲಾಗಿದೆ. ಗುಪ್ತಚರ ವಿಭಾಗ, ಬೆಂಗಳೂರು ಎಸ್‌ಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಅವರನ್ನು ದಾವಣಗೆರೆ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ. ಆ ಸ್ಥಾನದಲ್ಲಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಉಮಾ ಪ್ರಶಾಂತ್‌ ಅವರಿಗೆ ಹುದ್ದೆಯನ್ನು ನೀಡಿಲ್ಲ.

ಉಮಾ ಪ್ರಶಾಂತ್‌ ಆಗಸ್ಟ್ 2022ರ ಬಳಿಕ ದಾವಣಗೆರೆ ಎಸ್‌ಪಿಯಾಗಿ ಅಧಿಕಾರವಹಿಸಿಕೊಂಡರು. ಅದಕ್ಕೂ ಮೊದಲು ಅವರು ಚಿಕ್ಕಮಗಳೂರು ಎಸ್‌ಪಿಯಾಗಿದ್ದರು. ಚಿಕ್ಕಮಗಳೂರಿನ ಮೊದಲ ಮಹಿಳಾ ಎಸ್ಪಿಯಾಗಿ ಕಾರ್ಯ ನಿರ್ವಹಣೆ ಮಾಡಿದ ಹೆಗ್ಗಳಿಕೆ ಅವರದ್ದು.

ಅವರು ಮಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ACB) ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಉಮಾ ಪ್ರಶಾಂತ್ ಕುಣಿಗಲ್, ಕಾರವಾರ ಮತ್ತು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular