HomeKarnatakaತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ದೂರು ನೀಡಿ ಸಿಕ್ಕಿಬಿದ್ದ ಯುವತಿ

ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ದೂರು ನೀಡಿ ಸಿಕ್ಕಿಬಿದ್ದ ಯುವತಿ

ದಾವಣಗೆರೆ: ಯುವತಿಯೊಬ್ಬಳು ತನ್ನ ಮನೆಯಲ್ಲಿ ತಾನೇ ಕಳ್ಳತನ ಮಾಡಿ ಯಾರೋ ಪ್ರಜ್ಞೆ ತಪ್ಪಿಸಿ ಮನೆಯಲ್ಲಿದ್ದ ಚಿನ್ನಭರಣ, ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಸುಳ್ಳು ಕಥೆ ಕಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಯುವತಿ ಹಾಗೂ ಆಕೆಯ ಸ್ನೇಹಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ತಸ್ಮಿಯ ಖಾನಂ (26) ಹಾಗೂ ಮುಜೀಬುಲ್ಲಾ ಶೇಖ್ ಬಂಧಿತ ಆರೋಪಿಗಳು.

ಬಂಧಿತರಿಂದ 9.5 ಲಕ್ಷ ಮೌಲ್ಯದ 155 ಗ್ರಾಂ ಚಿನ್ನದ ಆಭರಣ ಹಾಗೂ 1.27 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ಇಲಿಯಾಜ್ ನಗರದ ಮುಜಾಬುಲ್ ಜೊತೆಸೇರಿ ತಸ್ಮಿಯ ಖಾನಂ ತನ್ನದೇ ಮನೆಯಲ್ಲಿ ಕಳ್ಳತನ ಮಾಡಿದ್ದು, ಬಳಿಕ ತಾನೊಬ್ಬಳೇ ಮನೆಯಲ್ಲಿದ್ದಾಗ ಯಾರೋ ಬಂದು ಪ್ರಜ್ಞೆ ತಪ್ಪಿಸಿ ಕಳ್ಳತನ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಳು.

ಪ್ರಕರಣ ದಾಖಲಿಸಿಕೊಂಡ ಚನ್ನಗಿರಿ ಇನ್ಸ್ ಪೆಕ್ಟರ್ ಬಾಲಚಂದ್ರ ನಾಯ್ಕ್ ತಂಡ ಪೊಲೀಸ್ ಕಾಲ್ ಮಾಹಿತಿ ಮೇರೆಗೆ ಮುಜೀಬುಲ್ಲಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಸ್ಮಿಯ ಖಾನ್ ಸಿಕ್ಕಿ ಬಿದ್ದಿದ್ದಾಳೆ. ಬಳಿಕ ತಾನೇ ಮಾಡಿದ್ದ ತನ್ನದೇ ಮನೆಗಳ್ಳತನ ಬಾಯ್ಬಿಟ್ಟಿದ್ದಾಳೆ.

For Latest News Updates, Join Our Whatsapp Community🚩
RELATED ARTICLES

Most Popular