HomeKarnatakaಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು ಸಂಗ್ರಹಿಸಿದ ಆರೋಪ ಹಿನ್ನೆಲೆಯಲ್ಲಿ ಗೋದಾಮಿನ ಮೇಲೆ ದಾಳಿ ನಡೆಸಲಾಗಿತ್ತು. 16.65 ಲಕ್ಷ ರೂಪಾಯಿ ಮೌಲ್ಯದ ಗೃಹಬಳಕೆ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಕಿಟ್ ಗಳ ಮೇಲೆ ಶಿವಶಂಕರಪ್ಪ ಮತ್ತು ಅವರ ಪುತ್ರ ಮಲ್ಲಿಕಾರ್ಜುನ್ ಅವರ ಫೋಟೋ ಇತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಅಧಿಕಾರಿ ಬಿ.ಎಂ. ಮಾನೆ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಶಾಮನೂರು ಶಿವಶಂಕರಪ್ಪ ಆಪ್ತರಾಗಿರುವ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಾಲತೇಶ್ ಜಾಧವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular