HomeLatest NewsBREAKING: ಮತ್ತೋರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆ: ದಾವಣಗೆರೆಯಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ

BREAKING: ಮತ್ತೋರ್ವ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆ: ದಾವಣಗೆರೆಯಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣ

ದಾವಣಗೆರೆ: ದಾವಣಗೆರೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತೋರ್ವ ಮಹಿಳೆಯಲ್ಲಿ ಕೋವಿಡ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

28 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮಹಿಳೆಗೆ ಚಿಕಿತ್ಸೆ ಮುಂದುವರೆದಿದೆ. ಈಗಾಗಲೇ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮತ್ತಿಬ್ಬರಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕೋವಿಡ್ ಸೋಂಕಿನಿಂದ ಈಗಾಗಲೇ ಓರ್ವ ವ್ಯಕ್ತಿ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular