HomeLatest Newsಅಪಘಾತದಲ್ಲಿ ಪಾದಚಾರಿ ಸಾವು: ಬರೋಬ್ಬರಿ 32 ವರ್ಷಗಳ ಬಳಿಕ ಆರೋಪಿ ಲಾರಿ ಚಾಕನನ್ನು ಬಂಧಿಸಿದ ಪೊಲೀಸರು

ಅಪಘಾತದಲ್ಲಿ ಪಾದಚಾರಿ ಸಾವು: ಬರೋಬ್ಬರಿ 32 ವರ್ಷಗಳ ಬಳಿಕ ಆರೋಪಿ ಲಾರಿ ಚಾಕನನ್ನು ಬಂಧಿಸಿದ ಪೊಲೀಸರು

ದಾವಣಗೆರೆ: ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ್ದ ಪ್ರಕರಣದಲ್ಲಿ ಬರೋಬ್ಬರಿ 32ವರ್ಷಗಳ ಬಳಿಕ ಆರ್ಪಿ ಲಾರಿ ಚಾಲಕನ್ನು ಬಂಧಿಸಿರುವ ಘಟನೆ ದಾವನಗೆರೆಯಲ್ಲಿ ನಡೆದಿದೆ.

ಜಗಳೂರು ಪೊಲೀಸರು ಆರೋಪಿ ನಾರಿ ಚಾಲಕನನ್ನು ಬಂಧಿಸಿದ್ದು, ಬಂಧಿತನನ್ನು ಗಂಗಾಧರಪ್ಪ (67 ಎಂದು ಗುರುತಿಸಲಾಗಿದೆ. 1994 ಕಲ್ಲೇದೇವಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಲಾರಿ ಹರಿದು ಪಾದಚಾರಿ ಸಾವನ್ನಪ್ಪಿದ್ದರು. ಅಪಘಾತದ ಬಳಿಕ 32ವರ್ಷಗಳ ಕಾಲ ಲಾರಿ ಚಾಲಕ ತಲೆಮರೆಸಿಕೊಂಡಿದ್ದ.

ಈಗ ಲಾರಿ ಚಾಲಕನನ್ನು ಪತ್ತೆ ಮಾಡಿರುವ ಪೊಲೀಸರು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಸಿದ್ದರಾಮಯ್ಯ ಹಾಗೂ ಎಸ್ ಐ ವೆಂಕಟೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಲಾರಿ ಚಾಲಕನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಲಾರಿ ಚಾಲಕನ್ನು ಜಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular