ದಾವಣಗೆರೆ: ಆ್ಯಕ್ಸಲ್ ಕಟ್ ಆಗಿ ಬಸ್ ಪಲ್ಟಿಯಾದ ಪರಿಣಾಮ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ದರ್ಶನ್ (21) ಎಂದು ಗುರುತಿಸಲಾಗಿದೆ.
ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

