HomeKarnatakaಬಿಜೆಪಿ ಶಾಸಕನಿಂದ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್

ಬಿಜೆಪಿ ಶಾಸಕನಿಂದ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್

ದಾವಣಗೆರೆ: ಬಿಜೆಪಿ ಶಾಸಕರೊಬ್ಬರು ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಶಾಸಕ ಬಿ.ಪಿ.ಹರೀಶ್, ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮಾತನಾಡುತ್ತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹರಿಹರ ತುಂಗಭದ್ರಾ ಸೇತುವೆಯಿಂದ ಗಾಂಧಿ ಮೈದಾನದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ವಿಚಾರವಾಗಿ ಶಾಸಕ ಹರೀಶ್ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular