HomeKarnatakaBIG NEWS: ಬಾಂಬೆ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ

BIG NEWS: ಬಾಂಬೆ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬೆಂಕಿ ಅವಘಡ ಪ್ರಕರಣಗಳು ಹೆಚ್ಚುತ್ತಿವೆ. ಬಾಂಬೆ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ಕಿಡಿ ತಗುಲಿ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆ ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ಹೋಟೆಲ್ ಗೂ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರತ ಸಂಭವಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular