HomeLatest Newsದಾವಣಗೆರೆ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ: ಅಲ್ಪಸಂಖ್ಯಾತರೂ ನಮ್ಮೊಂದಿಗಿದ್ದಾರೆ: ಸಿಎಂ, ಡಿಸಿಎಂ,...

ದಾವಣಗೆರೆ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ: ಅಲ್ಪಸಂಖ್ಯಾತರೂ ನಮ್ಮೊಂದಿಗಿದ್ದಾರೆ: ಸಿಎಂ, ಡಿಸಿಎಂ, ಸಚಿವರಿಂದ ಒಗ್ಗಟ್ಟು ಪ್ರದರ್ಶನ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಮುಸ್ಲಿಂ ನಾಯಕರಿಂದ ಬಂಡಾಯದ ಬಿಸಿ ತಟ್ಟಿದೆ. ಈ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು.

ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತರು ನಮ್ಮ ಜತೆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದೇ ಪಕ್ಷದ ಆದ್ಯತೆ. ಸುಳ್ಳು ಭರವಸೆಗಳನ್ನು ನೀಡುವ ಬದಲು, ಏನು ಹೇಳುತ್ತೇವೋ ಅದನ್ನೇ ಕಾರ್ಯರೂಪಕ್ಕೆ ತರುತ್ತೇವೆ. ಕಳೆದ ಅವಧಿಯಲ್ಲಿ ನೀಡಿದ ಭರವಸೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಈಡೇರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಮೂರು ವರ್ಷಗಳ ಅಧಿಕಾರಾವಧಿಯಲ್ಲಿ, ನಾಲ್ಕನೇ ಬಜೆಟ್ ಅನ್ನು ಮಂಡಿಸಲಾಗಿದೆ. ಬಜೆಟ್ ಅನ್ನು ಪರಿಶೀಲಿಸಿದರೆ, ಪಕ್ಷವು ತನ್ನ ಮಾತುಗಳನ್ನು ಉಳಿಸಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಾತ ಶಾಮನೂರು ಶಿವಶಂಕರಪ್ಪನವರಂತೆ ಈಗ ಅವರ ಮೊಮ್ಮಗನೂ ಜನಸೇವೆ ಮಾಡಲು ಮುಂದೆ ಬಂದಿದ್ದಾರೆ. ಅವರೂ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದರು.

ದಾವಣಗೆರೆ ನಗರ ಬೆಂಗಳೂರಿಗಿಂತಲೂ ಉತ್ತಮವಾಗಿ ಯೋಜಿತವಾಗಿರುವ ನಗರ. ನೂರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಪ್ಯಾಕೇಜ್‌ಗಳನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ. ದಾವಣಗೆರೆಯನ್ನು ರಾಜ್ಯದ ಒಂದು ಪ್ರಮುಖ ವೈದ್ಯಕೀಯ ಮತ್ತು ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವಲ್ಲಿ ಶಿವಶಂಕರಪ್ಪನವರ ಕುಟುಂಬ ಮತ್ತು ಅವರ ಸಂಸ್ಥೆಗಳ ಕೊಡುಗೆ ಅಪಾರ ಎಂದು ಸ್ಮರಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular