HomeKarnatakaELECTION BREAKING: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ELECTION BREAKING: ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ ಬಾರಿಸಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6430 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸೋಲನುಭವಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಇನ್ನು ಬಾಗಲಕೋಟೆ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಸೋಲನುಭವಿಸಿದ್ದಾರೆ. ಈ ಮೂಲಕ ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿ, ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular