HomeKarnatakaದಾವಣಗೆರೆ ಮಾಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ; ಸಿಬ್ಬಂದಿಗಳ ಸಂಬಳಕ್ಕಿಂತ ವಹಿವಾಟು ಹೆಚ್ಚಿರುವುದನ್ನು...

ದಾವಣಗೆರೆ ಮಾಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ; ಸಿಬ್ಬಂದಿಗಳ ಸಂಬಳಕ್ಕಿಂತ ವಹಿವಾಟು ಹೆಚ್ಚಿರುವುದನ್ನು ಪ್ರಶ್ನಿಸಿದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವಲಯ-1 ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಪಾಲಿಕೆ ಸಿಬ್ಬಂದಿಗಳ ಸಂಬಳದ ವ್ಯವಹರಗಳ ಬಗ್ಗೆ ವಿಚಾರಿಸಿದ್ದಾರೆ.

ದಾವಣಗೆರೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಿಬ್ಬಂದಿಗಳಿಗೆ ನಿಮ್ಮ ಸಂಬಳ ಎಷ್ಟಿದೆ? ಇಎಂಐ ಎಷ್ಟು? ಸಂಬಳಕ್ಕಿಂತ ವಹಿವಾಟು ಹೆಚ್ಚಿದೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇ ಸ್ವತ್ತು ಸೇರಿದಂತೆ ಅನೇಕ ಸೇವೆಗಳಿಗೆ ಅಧಿಕ ಹಣ ಸಂಗ್ರಹ ಮಾಡುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಲಿಕೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯಿಂದಲೂ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಸಿಬ್ಬಂದಿಯ ಬ್ಯಾಂಕ್ ವಹಿವಾಟಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಟಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular