ದಾವಣಗೆರೆ: ಸರ್ವೆ ಇಲಾಖೆಯ ಇಬ್ಬರು ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.
ಸರ್ವೆ ಸೂಪರ್ ವೈಸರ್ ರಾಮಪ್ಪ ಅಡಿವೆಪ್ಪ ದಾಸರ್ ಹಾಗೂ ಸರ್ಕಾರಿ ಪರವಾನಗಿ ಭೂಮಾಪಕ ಆನಂದಪ್ಪ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದವರು. 5000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಭೂಮಿ ಅಳತೆಗೆ ರೈತ ರುದ್ರೇಶ್ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

