HomeKarnatakaBIG NEWS: ವ್ಯಕ್ತಿಯನ್ನು ಬಲಿ ಪಡೆದಿದ್ದ ಕೋತಿ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

BIG NEWS: ವ್ಯಕ್ತಿಯನ್ನು ಬಲಿ ಪಡೆದಿದ್ದ ಕೋತಿ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ದಾವಣಗೆರೆ: ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಗುತ್ಯಪ್ಪ ಎಂಬುವವರು ಕೋತಿ ದಾಳಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಗುತ್ಯಪ್ಪ (60) ಎಂಬುವವರ ಮೇಲೆ ಮಂಗ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಗುತ್ಯಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗನ ದಾಳಿ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಸಿ, ಮಂಗನನ್ನು ಸೆರೆ ಹಿಡಿದಿದ್ದಾರೆ.

ಸೆರೆ ಹಿಡಿದ ಕೋತಿಯನ್ನು ಅರಣ್ಯ ಇಲಾಖೆ ಸಿಬಂದಿ ಬೋನಿನಲ್ಲಿ ಇಟ್ಟಿದ್ದಾರೆ. ಅರಕೆರೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular