HomeLatest NewsBREAKING: ಜಮೀನು ವಿವಾದ: ತಮ್ಮನನ್ನೇ ಕೊಲೆಗೈದ ಅಣ್ಣ

BREAKING: ಜಮೀನು ವಿವಾದ: ತಮ್ಮನನ್ನೇ ಕೊಲೆಗೈದ ಅಣ್ಣ

ದಾವಣಗೆರೆ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸ್ವಂತ ತಮ್ಮನನ್ನೇ ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಮಾಯಕೊಂಡದಲ್ಲಿ ನಡೆದಿದೆ.

ಸಿ.ಕೆ.ನೀಲಪ್ಪ (62) ಕೊಲೆಯಾದ ತಮ್ಮ. ಸಿ.ಕೆ.ಚಂದ್ರಪ್ಪ ತಮ್ಮನನ್ನೇ ಕೊಲೆಗೈದ ಅಣ್ಣ. ಜಮೀನು ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಚಂದ್ರಪ್ಪ ತಮ್ಮನ ಮೇಲೆ ಹಲ್ಲೆ ನಡೆಸಿದ್ದಾನೆ.

ಹಲ್ಲೆಗೊಳಗಾದ ನೀಲಪ್ಪ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಯಕೊಂಡ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಂದ್ರಪ್ಪ ಹಾಗೂ ಇಡೀ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ನೀಲಪ್ಪ ಕುಟುಂಬದವರು ಪಟ್ಟು ಹಿಡಿದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular