HomeLatest NewsBIG NEWS: ಅಲ್ಪಸಂಖ್ಯಾತರಿಗೆ ಬೇರೆ ಅವಕಾಶ ನೀಡಲಾಗುವುದು; ಮನವೊಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

BIG NEWS: ಅಲ್ಪಸಂಖ್ಯಾತರಿಗೆ ಬೇರೆ ಅವಕಾಶ ನೀಡಲಾಗುವುದು; ಮನವೊಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಮರ್ಥ್ ಶಾಮನೂರು ಅವರಿಗೆ ನೀಡಿದ್ದಕ್ಕೆ ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದು, ಕೈ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಸಂಬಂಧ ಅಲ್ಪಸಂಖ್ಯಾತರನ್ನು ಮನವೊಲಿಸುತ್ತೇವೆ, ಅವರಿಗೆ ಬೇರೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ದಾವಣಗೆರೆ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರಲ್ಲಿನ ಅಸಮಾಧಾನ ಹೋಗಲಾಡಿಸಲು ಪ್ರಯತ್ನ ಮಾಡುತ್ತೇವೆ. ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ 100% ಗೆಲ್ಲುವ ವಿಶ್ವಾಸ ಇದೆ ಎಂದರು.

ಈ ಹಿಂದೆ ಬಿಜೆಪಿಯವರು ಇದೇ ರೀತಿ ಹೇಳಿದ್ದರು. ಬಸವರಾಜ್ ಬೊಮ್ಮಾಯಿ, ಕುಮಾರಸ್ವಾಮಿ ಪುತ್ರ ಗೆಲ್ತಾರೆ ಅಂತ ಹೇಳಿದ್ದರು, ಸೋತರು. ನಾವು ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿ ಕೊಟ್ಟಿದ್ದೇವೆ. ಬೈ ಎಲೆಕ್ಷನ್ ಗೆದ್ದು ಸಾಬೀತು ಮಾಡಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡವರು, ಅಲ್ಪಸಂಖ್ಯಾತರು, ರಾಜ್ಯದ ಜನ ನಮ್ಮ ಪರವಾಗಿ ಇದ್ದಾರೆ. ಈ ಉಪಚುನಾವಣೆಲ್ಲಿ ಬಿಜೆಪಿ ಗೆಲ್ಲೋದಿಲ್ಲ, ದಿಕ್ಸೂಚಿ ಹೇಗೆ ಆಗುತ್ತದೆ?.‌ ನಾವು ಅಧಿಕಾರದಲ್ಲಿ ಇದ್ದೇವೆ, ನಮಗೆ ಸಂಪೂರ್ಣ ಗೆಲ್ಲುವ ವಿಶ್ವಾಸವಿದೆ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕಡೇ ಸೋಲುತ್ತದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular