ದಾವಣಗೆರೆ: ದಾವಣಗೆರೆ ಪೊಲೀಸರು ಮತ್ತೋರ್ವ ಶಮ್ಕಿತ ಉಗ್ರನನ್ನು ಬಂಧಿಸಿರುವ ಘಟನೆ ನಡೆದಿದೆ. ಪಾಕಿಸ್ತಾನ ಉಗ್ರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಶಂಕಿತನನ್ನು ಬಂಧಿಸಲಾಗಿದೆ.
ಹರಿಹರ ನಗರದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಸುಹೇಲ್ (20) ಎಂಬಾತನನ್ನು ಬಂಧಿಸಲಾಗಿದೆ. ಈತ ಹರಿಹರ ಬಳಿಯ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಬಂದಿದ್ದ. ಇನ್ ಸ್ಟಾಗ್ರಾಂ ಮೂಲಕ ಪಾಕಿಸ್ತಾನ ಉಗ್ರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಹಾಗೂ ದಾವಣಗೆರೆ ಗ್ರಾಮಾಂತರ ಡಿವೈಎಸ್ ಪಿ ಬಸವರಾಜ್ ನೇತೃತ್ವದ ತಂಡದಿಂದ ಶಂಕಿತ ಉಗ್ರ ಸಾಅಹೇಲ್ ನನ್ನು ಬಂಧಿಸಲಾಗಿದೆ.
ತಿಂಗಳ ಹಿಂದಷ್ಟೇ ತುಮಕೂರಿನಲ್ಲಿ ದಾವಣಗೆರೆ ಮೂಲದ ಇಬ್ಬರು ಶಂಕಿತ ಉಗ್ರರಾದ ಜಮೀರ್ ಖಾನ್ , ಅಲ್ಲಾಭಕ್ಷ ಎಂಬುವವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದ ಜಾಡು ಹಿಡಿದ ಪೊಲೀಸರು ಈಗ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

