HomeAgriculture1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ.

ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ ವರ್ಷಗಳಿಂದ 1500ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನೆಟ್ಟು ಘೋಷಣೆ ಮಾಡಿದ್ದರು. ಗೊಬ್ಬರ, ಮಣ್ಣು ಹಾಕಿಸಿ ಗಿಡಗಳನ್ನು ಬೆಳೆಸಿದ್ದು, ದುಷ್ಕರ್ಮಿಗಳು ಗಿಡಗಳನ್ನು ಕಡಿದು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆದು ನಿಂತ ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದರಿಂದ ಕಂಗಾಲಾದ ರೈತ ಕುಟುಂಬ ಕಣ್ಣೀರು ಹಾಕಿದೆ. ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಸುಳಿವು ಸಿಕ್ಕಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular