ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದಲೂ ರಣಕಹಳೆ: ಕೇಜ್ರಿವಾಲ್ ಪ್ಲಾನ್ ಗೆ ಭಗವಂತ್ ಸಾಥ್

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದಲೂ ಸಿದ್ಧತೆ ಕೈಗೊಳ್ಳಲಾಗಿದೆ. ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸಲಿದ್ದಾರೆ.

ಮಾರ್ಚ್ 4ರಂದು ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ದಾವಣಗೆರೆಯಿಂದ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ಅರವಿಂದ್ ಕೇಜ್ರಿವಾಲ್ ಪ್ಲಾನ್ ಮಾಡಿಕೊಂಡಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಆಮ್ ಆದ್ಮಿ ಪಕ್ಷದ ಸಮಾವೇಶಕ್ಕೆ ಬಾರಿ ಸಿದ್ಧತೆ ನಡೆಸಲಾಗಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಜೊತೆಗೆ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷವನ್ನು ಸಜ್ಜುಗೊಳಿಸಲು ಕೇಜ್ರಿವಾಲ್ ಪ್ಲಾನ್ ಮಾಡಿಕೊಂಡಿದ್ದು, ಅವರಿಗೆ ಭಗವಂತ್ ಮಾನ್ ಸಾಥ್ ನೀಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read