HomeKarnatakaSHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

SHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

ದಾವಣಗೆರೆ: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ.

ಕೆ. ನಾಗೇಂದ್ರಪ್ಪ(66) ಮೃತಪಟ್ಟವರು. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಜೇನು ನೊಣಗಳು ದಾಳಿ ಮಾಡಿ ಕಚ್ಚಿವೆ. ಪ್ರಜ್ಞೆ ಕಳೆದುಕೊಂಡಿದ್ದ ನಾಗೇಂದ್ರಪ್ಪ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular