HomeKarnatakaಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ ಹಚ್ಚಿದ್ದು, ಗಿಡಗಳು ಸುಟ್ಟು ಹೋಗಿವೆ.

ಸುಮಾರು 10 ಲಕ್ಷ ರೂ.ಗೂ ಅಧಿಕ ನಷ್ಟವಾಗಿದ್ದು, ಬೆಳೆ ಹಾನಿ ಪರಿಹಾರಕ್ಕೆ ರೈತ ವಿಶ್ವನಾಥಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೆ, ಅವರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಬೆಂಕಿಯಿಂದ ಸುಟ್ಟಿರುವ ತೋಟಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ವಿಶ್ವನಾಥಪ್ಪ ಅಡಿಕೆ ಗಿಡ ನೆಟ್ಟಿದ್ದು, ಜೊತೆಗೆ ಬಾಳೆ ಹಾಕಿದ್ದರು. ಬಾಳೆ ಕಟಾವಿಗೆ ಬಂದಿತ್ತು. ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ 1300 ಅಡಿಕೆ ಮತ್ತು 1000ಕ್ಕೂ ಅಧಿಕ ಬಾಳೆ ಗಿಡಗಳು ಸುಟ್ಟು ಹೋಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular