HomeKarnatakaಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ವಾಕ್ ಇನ್ ಇಂಟರ್‍ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular