HomeKarnatakaನಕಲಿ ಕ್ಲಿನಿಕ್ ಮೇಲೆ ದಾಳಿ: ಇಬ್ಬರು ನಕಲಿ ವೈದ್ಯರಿಗೆ ದಂಡ ವಿಧಿಸಿ; ಮೆಡಿಕಲ್ ಸ್ಟೋರ್ ಮುಚ್ಚಲು...

ನಕಲಿ ಕ್ಲಿನಿಕ್ ಮೇಲೆ ದಾಳಿ: ಇಬ್ಬರು ನಕಲಿ ವೈದ್ಯರಿಗೆ ದಂಡ ವಿಧಿಸಿ; ಮೆಡಿಕಲ್ ಸ್ಟೋರ್ ಮುಚ್ಚಲು ಡಿಸಿ ಆದೇಶ

ದಾವಣಗೆರೆ: ದಾವಣಗೆರೆಯ ಹೊನ್ನಾಳಿ ತಾಲೂಕಿನ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಾಳಿ ನಡೆಸಿದ್ದು, ಇಬ್ಬರು ನಕಲಿ ವೈದ್ಯರಿಂದ ತಲಾ 1 ಲಕ್ಷ ದಂಡ ವಿಧಿಸಿ, ಆಸ್ಪತ್ರೆ, ಮೆಡಿಕಲ್ ಶಾಪ್ ಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.

ಭದ್ರಾವತಿ ಮೂಲದ ಶ್ರೀನಿವಾಸ್ (57) ಹಾಗೂ ಹಾವೇರಿ ಜಿಲ್ಲೆಯ ಹಿರೆಕೇರೂರು ಮೂಲದ ಲಕ್ಷ್ಮಣ್ (45) ನಕಲಿ ವೈದ್ಯರಾಗಿದ್ದಾರೆ. ಶ್ರೀನಿವಾಸ್ ಹೊನ್ನಳಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬಾಡಿಗೆ ಮನೆ ಪಡೆದು ಹಲವು ವರ್ಷಗಳಿಂದ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ. ಅದರ ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ತೆಗೆದು ಜನರಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ.

ಇನ್ನು ಮತ್ತೋರ್ವ ನಕಲಿ ವೈದ್ಯ ಲಕ್ಷ್ಮಣ್, ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ಮನೆ ಬಾಡಿಗೆ ಪಡೆದು ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದ. ಎರಡು ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಪ್ರಮಾಣಪತ್ರ ಪರಿಶೀಲಿಸಿದಾಗ ನಕಲಿ ಪ್ರಮಾಣ ಪತ್ರ ಎಂಬುದು ಬೆಳಕಿಗೆ ಬದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ನಕಲಿ ವೈದ್ಯರಿಗೆ ತಲಾ 1 ಲಕ್ಷ ದಂಡ ವಿಧಿಸಿರುವ ಡಿಸಿ ಜಿ.ಎಂ.ಗಂಗಾಧರಸ್ವಾಮಿ, ಕ್ಲಿನಿಕ್, ಮೆಡಿಕಲ್ ಶಾಪ್ ಗಳಿಗೆ ಬೀಗ ಹಾಕುವಂತೆ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular