HomeKarnatakaರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿಗಾರಿಕೆಯಿಂದಾಗಿ ಕಳೆದ ವರ್ಷ 6 ಸಾವಿರ ಕೋಟಿ ರೂಪಾಯಿ ಆದಾಯ ಬಂದಿತ್ತು. ಈ ವರ್ಷ 9 ಸಾವಿರ ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿದ್ದು, ಯೋಜನೆ ರೂಪಿಸಲಾಗಿದೆ. ವಾಹನಗಳಿಗೆ ಜಿಪಿಎಸ್ ಅಳವಡಿಸುವ ಮೂಲಕ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುತ್ತಿದೆ. ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular