ದಾವಣಗೆರೆ: ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಭಾರಿ ಸಿಡಿಲಿಗೆ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ಹೊನ್ನಾಳಿ ತಾಲೂಕಿನ ಜೀನಿಹಳ್ಳಿಯಲ್ಲಿ ಮಹೇಶಪ್ಪ ಎನ್ನುವವರಿಗೆ ಸೇರಿದ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ತಡರಾತ್ರಿ ಸುರಿದ ಭಾರಿ ಮಳೆ, ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.