ಫೆ. 3, 4 ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ

ದಾವಣಗೆರೆ: ಫೆಬ್ರವರಿ 3, 4 ರಂದು ಪತ್ರಕರ್ತರ 38ನೇ ರಾಜ್ಯ ಮಟ್ಟದ ಸಮ್ಮೇಳನ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಮತ್ತು ಜಿಲ್ಲಾ ಘಟಕ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ಐದು ಸಾವಿರಕ್ಕೂ ಅಧಿಕ ಪತ್ರಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ 1992 ರಲ್ಲಿ ಸಮ್ಮೇಳನ ನಡೆದಿತ್ತು. ಈಗ ದಾವಣಗೆರೆ ಜಿಲ್ಲೆಯಾಗಿ 25 ವರ್ಷಗಳ ನಂತರ ಮೊದಲ ಬಾರಿಗೆ ಪತ್ರಕರ್ತರ ಸಮ್ಮೇಳನ ನಡೆಯುತ್ತಿದೆ. ಫೆಬ್ರವರಿ 3ರಂದು ಬೆಳಗ್ಗೆ 9 ಗಂಟೆಗೆ ಕುವೆಂಪು ಕನ್ನಡ ಭವನದಿಂದ ಪತ್ರಕರ್ತರ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read