HomeKarnatakaಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದಿದ್ದಾರೆ.

ಕೆಲವು ದಿನಗಳಿಂದ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ ಮೂಡಿಸಿತ್ತು. ಇತ್ತೀಚೆಗೆ ನಾಲ್ವರ ಮೇಲೆ ದಾಳಿ ನಡೆಸಿದ್ದು, ಜನರಲ್ಲಿ ಆತಂಕ ಹೆಚ್ಚಾಗಿತ್ತು. ಮೆಕ್ಕೆಜೋಳದ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದನ್ನು ಗ್ರಾಮಸ್ಥರು ನೋಡಿದ್ದಾರೆ. ಕೂಡಲೇ ಕೆಲವರು ದೊಣ್ಣೆ ಕಲ್ಲುಗಳಿಂದ ಹೊಡೆದು ಚಿರತೆ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಹೊನ್ನಾಳಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಚಿರತೆಯನ್ನು ವಶಕ್ಕೆ ಪಡೆದುಕೊಂಡಿದ್ದು, ನಿತ್ರಾಣಗೊಂಡಿದ್ದ ಚಿರತೆಗೆ ಉಪಚರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular