HomeIndiaಮಹಾ ಕುಂಭಮೇಳ ಅವಧಿ ವಿಸ್ತರಣೆ ವಂದತಿ ಬಗ್ಗೆ ಡಿಸಿ ಸ್ಪಷ್ಟನೆ: ಫೆ. 26ರ ಶಿವರಾತ್ರಿಯಂದು ಮುಕ್ತಾಯ

ಮಹಾ ಕುಂಭಮೇಳ ಅವಧಿ ವಿಸ್ತರಣೆ ವಂದತಿ ಬಗ್ಗೆ ಡಿಸಿ ಸ್ಪಷ್ಟನೆ: ಫೆ. 26ರ ಶಿವರಾತ್ರಿಯಂದು ಮುಕ್ತಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಮಹಾ ಕುಂಭಮೇಳಕ್ಕೆ ಭಾರಿ ಪ್ರಮಾಣದಲ್ಲಿ ಜನರು ಬರುತ್ತಿರುವುದರಿಂದ ಕುಂಭಮೇಳದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.

ಮಹಾ ಕುಂಭಮೇಳದ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಫೆಬ್ರವರಿ 26ಕ್ಕೆ ಮಹಾ ಕುಂಭಮೇಳ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಮಹಾ ಕುಂಭಮೇಳದ ಅವಧಿ ವಿಸ್ತರಣೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬುತ್ತಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಂಭಮೇಳದ ಅವಧಿಯು ಧಾರ್ಮಿಕ ಮಹೂರ್ತಗಳ ಮೇಲೆ ನಿರ್ಧರಿತವಾಗಿದೆ. ಫೆಬ್ರವರಿ 26 ಶಿವರಾತ್ರಿಯಂದು ಕೊನೆಯಾಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ದಿನಾಂಕ ವಿಸ್ತರಿಸುವ ಯಾವುದೇ ಪ್ರಸ್ತಾಪ ಜಿಲ್ಲಾಡಳಿತದ ಮುಂದೆ ಇಲ್ಲವೆಂದು ಹೇಳಿದ್ದಾರೆ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು, ಕುಂಭಮೇಳದ ಅವಧಿ ವಿಸ್ತರಿಸಬೇಕೆಂದು ಮನವಿ ಮಾಡಿದ್ದರು. ಇದುವರೆಗೆ ಮಹಾಕುಂಭ ಮೇಳದಲ್ಲಿ 55 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular