HomeKarnatakaಇಂಥ ಡಿಸಿಯನ್ನು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ: ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ...

ಇಂಥ ಡಿಸಿಯನ್ನು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ: ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಲತಾಕುಮಾರಿ

ಹಾಸನ: ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದಿದೆ.

ಮೀಸಲಾತಿ ಪಟ್ಟಿ ಪ್ರಕಟಣೆಯಲ್ಲಿ ನಿಯಮ ಗಾಳಿಗೆ ತೂರಲಾಗಿದೆ ಮತ್ತು ಕಡತಗಳನ್ನು ಬಾಕಿ ಇರಿಸಲಾಗಿದೆ ಎಂದು ಹೆಚ್.ಡಿ.ರೇವಣ್ಣ ಆರೋಪಿಸಿದ್ದರು. ಈ ವೇಳೆ “ಇಂಥ ಡಿಸಿಯನ್ನು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಗೊತ್ತಿಲ್ಲ” ಎಂದು ಬಹಿರಂಗವಾಗಿ ಹಗುರವಾಗಿ ಮಾತನಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇವಣ್ಣ ಅವರ ಈ ಹೇಳಿಕೆಗಳ ಬೆನ್ನಲ್ಲೇ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. “ನಿಮ್ಮನ್ನು ಹಿಡಿದಿಟ್ಟುಕೊಳ್ಳುವುದಕ್ಕೆ, ಹಿಡಿತದಲ್ಲಿಟ್ಟುಕೊಳ್ಳುವುದಕ್ಕೆ ಆಗಲಿಲ್ಲ ಅಂತಂದ್ರೆ ದ್ವೇಷಿಸುತ್ತಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ಭಾವುಕರಾಗಿ ತಿರುಗೇಟು ನೀಡಿದ್ದಾರೆ. “ನಾವು ನಿಯಮ ಮೀರಿದ್ದರೆ ಕಾನೂನಿನಲ್ಲಿ ಅವಕಾಶವಿದೆ, ಪತ್ರ ಬರೆಯಬಹುದಿತ್ತು. ಆದರೆ ಇಷ್ಟು ತುಚ್ಛವಾಗಿ, ಮಾನಸಿಕವಾಗಿ ನೋವಾಗುವಂತೆ ಮಾತನಾಡುವುದು ಹಿರಿಯ ರಾಜಕಾರಣಿಗೆ ಶೋಭೆಯಲ್ಲ. ಡಿಸಿ ಸ್ಥಾನದಲ್ಲಿದ್ದರೂ ಗೌರವ ಸಿಗುವುದಿಲ್ಲ ಎಂದರೆ ಹೇಗೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular