ಬೆಳಗಾವಿ: ವಿಧಾನಪರಿಷತ್ ಎಂಎಲ್ ಸಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹೋದರ ಚನ್ನರಾಜ ಹಟ್ಟಿಹೊಳಿ, ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆಸರಿದಿದ್ದಾರೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಚನ್ನರಾಜ ಹಟ್ಟಿಹೊಳಿ, ಇದೀಗ ಕಣದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಮನವೊಲಿಕೆ ಬಳಿಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ಚನ್ನರಾಜ ಹಟ್ಟಿಹೊಳಿ ಖಾನಾಪುರ ತಾಲೂಕಿನಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನವನ್ನೂ ಗೆದ್ದಿದ್ದರು. ಇದೀಗ ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ ಅವರು ಸ್ಪರ್ಧೆಯಿಂದ ಹಿಂದೆಸರಿದಿದ್ದಾರೆ ಎಂದು ತಿಳಿಸಿದ್ದಾರೆ.