HomeLive Newsಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಕೇಸ್: ಶಾಸಕ ಲಕ್ಷ್ಮಣ ಸವದಿ ವಿರುದ್ಧ...

ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಕೇಸ್: ಶಾಸಕ ಲಕ್ಷ್ಮಣ ಸವದಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣನವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಸವದಿ ಮತ್ತು ಬೆಂಬಲಿಗರ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನಿಂಗಪ್ಪ ಕರೆಣ್ಣನವರ ಹಲ್ಲೆ ಘಟನೆ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರು ಲಕ್ಷ್ಮಣ ಸವದಿ ಅವರ ಮನೆಗೆ ಹೋಗಿದ್ದಾಗ ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಕ್ಕೆ ಹೊಡೆದರು. ಅವರ ಪುತ್ರ ಚಿದಾನಂದ ಸೊಂಟಕ್ಕೆ ಒದ್ದರು. ಏಳೆಂಟು ಜನ ಬೆಂಬಲಿಗರು ಸೇರಿ ಹಲ್ಲೆ ಮಾಡಿದ್ದರು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಣ ಸವದಿ ಮತ್ತು ಅವರ ಪುತ್ರನನ್ನು ಬಂಧಿಸಬೇಕೆಂದು ಒತ್ತಾಯಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಪರ, ವಿರೋಧ ಪ್ರತಿಭಟನೆ ನಡೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular