HomeBusinessರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ.

ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಅಪೆಕ್ಸ್ ಬ್ಯಾಂಕ್, ಹಿರಿಯ ಸಹಕಾರಿ ಅಧಿಕಾರಿಗಳ ಸಭೆ ನಡೆಸಿದ್ದು, ಸಹಾಯಧನ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಅಲ್ಲದೇ ಹಿಂದಿನ ಸಾಲ ಮನ್ನಾ ಬಾಕಿ ಬಿಡುಗಡೆಗೆ ಕೋರಲಾಗಿತ್ತು.

ಕಳೆದ ಎರಡು ವರ್ಷಗಳಿಂದ ರೈತರ ಶೂನ್ಯ ಬಡ್ಡಿ ಸಾಲದ ಮೇಲಿನ ಸಹಾಯಧನ ಬಿಡುಗಡೆಯಾಗಿಲ್ಲ. ಇದರಿಂದ ಸಹಕಾರಿ ಬ್ಯಾಂಕ್ ಗಳ ಮೇಲೆ ಪರಿಣಾಮ ಉಂಟಾಗಿದೆ ಎಂದು ತಿಳಿಸಿ ಸಹಾಯಧನ ಬಿಡುಗಡೆಗೆ ಸಿಎಂಗೆ ಮನವಿ ಮಾಡಿದ್ದು, ಅಂತೆಯೇ ಸಹಾಯಧನ ಬಿಡುಗಡೆ ಕ್ರಮ ಕೈಗೊಳ್ಳಲಾಗಿದ್ದು, ಡಿಸೆಂಬರ್ 2ರ ಸೋಮವಾರ ಎಲ್ಲಾ ಬ್ಯಾಂಕುಗಳಿಗೆ ಸಹಾಯಧನ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular