ಬೆಂಗಳೂರು : DCET-25 ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು KEA ಪ್ರಕಟಿಸಿದೆ.ಆಕ್ಷೇಪಣೆಗಳು ಇದ್ದಲ್ಲಿ ಜುಲೈ 29ರ ಮಧ್ಯಾಹ್ನ 3ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು.
ಬಳಿಕ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್ ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹೊರಬಿದ್ದ ನಂತರ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಎಚ್. ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಇಬರು ಪ್ರಕಟಣೆ ಹೊರಡಿಸಿದೆ.
UGCET/UGNEET-25: ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಣೆಗೂ ಮುನ್ನ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಜುಲೈ 29ರಂದು ಸಂಜೆ 5 ಗಂಟೆಗೆ ಕೊನೆಯಾಗಲಿದೆ. ಅಭ್ಯರ್ಥಿಗಳು ತಮಗೆ ಆಸಕ್ತಿ ಇರುವ ಕೋರ್ಸ್/ಕಾಲೇಜುಗಳನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಲು ಕೋರಲಾಗಿದೆ. ಆಯುರ್ವೇದ ಕೋರ್ಸ್ ಬಿಟ್ಟು ಉಳಿದ ಎಲ್ಲ ಕೋರ್ಸ್ ಗಳಿಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಆರ್ಯುವೇದ ಕೋರ್ಸ್ ಸೀಟ್ ಮ್ಯಾಟ್ರಿಕ್ಸ್ ಇನ್ನೂ ಬಂದಿಲ್ಲದ ಕಾರಣ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಅದನ್ನು ಬಿಟ್ಟೇ ಮಾಡಲಾಗುತ್ತದೆ. ಎರಡನೇ ಸುತ್ತಿನ ಸೀಟು ಹಂಚಿಕೆ ಸಂದರ್ಭದಲ್ಲಿ ಆ ಕೋರ್ಸ್ ಅನ್ನೂ ಪರಿಗಣಿಸಲಾಗುತ್ತದೆ.
#DCET-25 ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದೆ. ಆಕ್ಷೇಪಣೆಗಳು ಇದ್ದಲ್ಲಿ ಜುಲೈ 29ರ ಮಧ್ಯಾಹ್ನ 3ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು. ಬಳಿಕ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 28, 2025
ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್ ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ.
ಎರಡನೇ…