HomeLive NewsBIG NEWS : 'DCET' ಅರ್ಜಿ ತಿದ್ದುಪಡಿಗೆ ಜೂನ್ 8 ರವರೆಗೆ ಅವಕಾಶ : 'KEA'...

BIG NEWS : ‘DCET’ ಅರ್ಜಿ ತಿದ್ದುಪಡಿಗೆ ಜೂನ್ 8 ರವರೆಗೆ ಅವಕಾಶ : ‘KEA’ ಮಾಹಿತಿ

ಬೆಂಗಳೂರು : DCET ಅರ್ಜಿಗಳಲ್ಲಿನ ತಪ್ಪುಗಳನ್ಜು ಸರಿಪಡಿಸಿಕೊಳ್ಳಲು ಜೂ 5ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ- ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಅಭ್ಯರ್ಥಿಗಳ ಮನವಿ ಮೇರೆಗೆ ಡಿಸಿಇಟಿ-2025ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಜಿಗಳಲ್ಲಿನ ಮಾಹಿತಿಯನ್ನು ಅರ್ಹತೆಗೆ ಅನುಗುಣವಾಗಿ ಮಾರ್ಪಡಿಸಲು ದಿನಾಂಕ 05-06-2025 ರ ಸಂ. 4.00 ರಿಂದ ದಿನಾಂಕ 08-06-2025 ರ ರಾತ್ರಿ 11.59 ರ ವರೆಗೆ ಅವಕಾಶವನ್ನು ಕಲ್ಪಿಸಲಾಗುವುದು. ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ತಾವು ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಮಾರ್ಪಡಿಸಿಕೊಳ್ಳುವ ಮೊದಲು ಅರ್ಜಿಯಲ್ಲಿ ಮುದ್ರಿತವಾಗಿರುವ ಮಾಹಿತಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ನಂತರ ಮಾರ್ಪಡಿಸಿಕೊಳ್ಳಲು ಕೋರಿದೆ. ಮಾರ್ಪಡಿಸಿಕೊಂಡ ನಂತರ ತಪ್ಪದೇ ಮಾರ್ಪಡಿಸಿದ ಅರ್ಜಿಯನ್ನು ಮುದ್ರಿಸಿ ತಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ತಪ್ಪಿದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ಮೊದಲು ಸಲ್ಲಿಸಿದ ಮಾಹಿತಿಯನ್ನೇ ಮುಂದಿನ ಎಲ್ಲಾ ಪ್ರಕ್ರಿಯೆಗೆ ಪರಿಗಣಿಸಲಾಗುವುದು.

ಗಮನಿಸಿ: ಅಭ್ಯರ್ಥಿಯ ಹೆಸರು, ತಾಯಿಯ ಹೆಸರು, ತಂದೆಯ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ರಾಷ್ಟ್ರೀಯತೆ – ಈ ವಿವರಗಳನ್ನು ತಿದ್ದುಪಡಿ / ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular