HomeLatest Newsಡಿಸಿಇಟಿ: ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಡಿಸಿಇಟಿ: ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬೆಂಗಳೂರು: DCET-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು, ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಜು.22ರಂದು ಬೆಳಿಗ್ಗೆ 11 ಗಂಟೆವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿಕೊಂಡವರು ಮಾತ್ರ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಚಾಯ್ಸ್ -1 ದಾಖಲಿಸಿದವರು ಮಂಗಳವಾರವೇ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular