HomeKarnatakaಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ: 2ನೇ ಸುತ್ತಿನ ಸೀಟು ಹಂಚಿಕೆ ಬಗ್ಗೆ ಮುಖ್ಯ...

ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ: 2ನೇ ಸುತ್ತಿನ ಸೀಟು ಹಂಚಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: DCET-26: ಡಿಪ್ಲೊಮಾ ಪದವೀಧರರಿಗೆ ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಕಲ್ಪಿಸಲು ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅಥವಾ ಬದಲಾಯಿಸಲು/ ತೆಗೆದುಹಾಕಲು ಅವಕಾಶ ನೀಡಲಾಗಿದೆ. ಇದಕ್ಕೆ ಸೆ.5ರಂದು ಮಧ್ಯಾಹ್ನ‌ 1 ಗಂಟೆವರೆಗೆ ಅವಕಾಶ ಇದೆ.

ಅಂದೇ ಸಂಜೆ 5ಕ್ಕೆ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.6ರಂದು ಸಂಜೆ 6ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಶುಲ್ಕಪಾವತಿಸಿಲು ಸೆ.7ರಿಂದ 9ರವರೆಗೆ ಅವಕಾಶ ನೀಡಲಾಗಿದೆ. ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.10 ಕೊನೆ ದಿನ.

ಈ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯ. ಯಾವುದೇ ಚಾಯ್ಸ್ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular