HomeLatest NewsSHOCKING : DCM 'ಅಜಿತ್ ಪವಾರ್' ಪ್ರಯಾಣಿಸುತ್ತಿದ್ದ ವಿಮಾನ ಪತನ : ಕೊನೆ ಕ್ಷಣದ ಭಯಾನಕ...

SHOCKING : DCM ‘ಅಜಿತ್ ಪವಾರ್’ ಪ್ರಯಾಣಿಸುತ್ತಿದ್ದ ವಿಮಾನ ಪತನ : ಕೊನೆ ಕ್ಷಣದ ಭಯಾನಕ ವೀಡಿಯೋ ವೈರಲ್ |WATCH VIDEO

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿದ್ದ ವಿಮಾನ ಇಂದು ಪತನಗೊಂಡಿದ್ದು, ಅಜಿತ್ ಪವಾರ್ ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಭೀಕರ ಘಟನೆಗೆ ಇಡೀ ದೇಶವೇ ಮರುಕ ವ್ಯಕ್ತಪಡಿಸಿದೆ. ಈ ದುರಂತಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಳಿಗ್ಗೆ ಸುಮಾರು 8:45 ರ ಸಮಯದಲ್ಲಿ ಲಿಯರ್ಜೆಟ್ 45 (Learjet 45) ವಿಮಾನವು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಮಾನ ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಸ್ಪೋಟಗೊಂಡು ಇಡೀ ವಿಮಾನ ಹೊತ್ತಿ ಉರಿದಿದೆ. ಸಿಸಿಟಿವಿಯಲ್ಲಿ ಭಯಾನಕ ದೃಶ್ಯಗಳು ಸೆರೆಯಾಗಿದೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.ಬೆಳಿಗ್ಗೆ ಸುಮಾರು 8:45 ರ ಸಮಯದಲ್ಲಿ ಲಿಯರ್ಜೆಟ್ 45 (Learjet 45) ವಿಮಾನವು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ಸ್ಥಳದ ಸಮೀಪವಿರುವ ಹೋಟೆಲ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನವು ರನ್ವೇ ಮೇಲೆ ಅಪ್ಪಳಿಸಿದ ತಕ್ಷಣ ಸ್ಫೋಟಗೊಂಡು ಬೆಂಕಿಯ ಉಂಡೆಯಾಗಿ ಬದಲಾಗುವುದು ದೃಶ್ಯದಲ್ಲಿ ಕಂಡುಬಂದಿದೆ. ಆಕಾಶಕ್ಕೆ ದಟ್ಟವಾದ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿದೆ.ಈ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಐವರು (ಇಬ್ಬರು ಪೈಲಟ್ಗಳು, ಭದ್ರತಾ ಸಿಬ್ಬಂದಿ ಮತ್ತು ಸಹಾಯಕ) ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಖಚಿತಪಡಿಸಿದೆ. ಪ್ರಸ್ತುತ ತನಿಖಾ ತಂಡಗಳು ಅಪಘಾತದ ಸ್ಥಳದಿಂದ ಬ್ಲಾಕ್ ಬಾಕ್ಸ್ ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular