HomeKarnatakaಶಿಕ್ಷಣ, ಉದ್ಯೋಗ, ಕೃಷಿ, ಆಹಾರ ತಯಾರಿಕೆ 4 ಯೋಜನೆಗಳಿಗೆ ಅರ್ಜಿ ಆಹ್ವಾನ: ಕರಪತ್ರ ಬಿಡುಗಡೆ ಮಾಡಿದ...

ಶಿಕ್ಷಣ, ಉದ್ಯೋಗ, ಕೃಷಿ, ಆಹಾರ ತಯಾರಿಕೆ 4 ಯೋಜನೆಗಳಿಗೆ ಅರ್ಜಿ ಆಹ್ವಾನ: ಕರಪತ್ರ ಬಿಡುಗಡೆ ಮಾಡಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ 4 ಯೋಜನೆಗಳಿಗೆ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸುವ ಕರಪತ್ರಗಳನ್ನು ಡಿಸಿಎಂ ಡಾ.ಜಿ. ಪರಮೇಶ್ವರ್ ಇಂದು ವಿಕಾಸಸೌಧದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯದವರಿಗೆ ಶಿಕ್ಷಣ, ಸ್ವಯಂ ಉದ್ಯೋಗ, ಕೃಷಿಗೆ ಮತ್ತು ಆಹಾರ ತಯಾರಿಕೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಿ, ಆರ್ಯ ವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ʼಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗಿದೆ ಎಂದರು.

ಕಳೆದ 7 ವರ್ಷಗಳಿಂದ ನಿಗಮಕ್ಕೆ ಬಿಡುಗಡೆಯಾದ ಅನುದಾನ ಹಾಗೂ ಮರುಪಾವತಿ ಮೊತ್ತ ಸೇರಿಸಿ ಒಟ್ಟು ₹85 ಕೋಟಿಗಳಲ್ಲಿ 16,785 ಫಲಾನುಭವಿಗಳಿಗೆ ಸಾಲ – ಸಬ್ಸಿಡಿ ಮತ್ತು ಶುಲ್ಕ ಮರುಪಾವತಿ ನೀಡಿ ಶೇ.96ರಷ್ಟು ಪ್ರಗತಿ ಸಾಧಿಸಲಾಗಿರುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

₹11 ಕೋಟಿ ಸಾಲ ಮರುಪಾವತಿಯನ್ನು ಪಡೆಯುವಲ್ಲಿ ನಿಗಮವು ಯಶಸ್ವಿಯಾಗಿರುತ್ತದೆ ಹಾಗೂ 740 ಫಲಾನುಭವಿಗಳು ಪೂರ್ಣಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡಿರುವುದು ಈ ನಿಗಮದ ವಿಶಿಷ್ಟ ಸಾಧನೆಯಾಗಿದೆ.  2026-27ನೇ ಸಾಲಿಗೆ ಎಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್‌ 15ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆರ್ಯ ವೈಶ್ಯ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷ ಕೆ.ವಿ.ರಾಮ್‌ ಪ್ರಸಾದ್‌, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿದ ರಾಜೇಂದ್ರ ಕುಮಾರ್‌ ಕಟಾರಿಯಾ, ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಕೆ. ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular