BIG NEWS : ಉಚ್ಛಾಟನೆಗೆ ಹೆದರಿ DCM ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ : ಜೆಡಿಎಸ್ ಲೇವಡಿ

ಬೆಂಗಳೂರು :   ಉಚ್ಛಾಟನೆಗೆ ಹೆದರಿ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ ಎಂದು ಜೆಡಿಎಸ್ ಲೇವಡಿ ಮಾಡಿದೆ. ಸದನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ಆರ್ ಎಸ್ ಎಸ್ ಗೀತೆ ಹಾಡಿದ್ದು, ಕಾಂಗ್ರೆಸ್ ಎಂಎಲ್ ಸಿ ಸುರ್ಜೆವಾಲಾ ಅವರು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದರು. ಇದೀಗ ಎಕ್ಸ್ ಖಾತೆಯಲ್ಲಿ ಜೆಡಿಎಸ್ ಲೇವಡಿ ಮಾಡಿದೆ.

ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ. ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್‌ ನೀಡಿರಲಿಲ್ಲ. @INCIndiaಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಜೆಡಿಎಸ್ ಲೇವಡಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read