ನವದೆಹಲಿ: ನಾಯಕತ್ವ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನಾಗಲಿ ಸಿದ್ದರಾಮಯ್ಯ ಅವರಾಗಲಿ ಚರ್ಚೆ ಮಾಡಿಲ್ಲ. ಹೈಕಮಾಂಡ್ ಮಟ್ಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ, ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಹೇಳಿದ ಅವರು, ಪಕ್ಷಕ್ಕೆ ನಾನು ಪಕ್ಷಕ್ಕೆ ಯಾವತ್ತೂ ಬ್ಲಾಕ್ ಮೇಲ್ ಮಾಡಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದೇನೆ. ಪಕ್ಷ ವಹಿಸಿರುವ ಕೆಲಸವನ್ನು ಮಾಡುತ್ತೇನೆ. ಪಕ್ಷ ಹೇಳುವವರೆಗೂ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಯಾರೂ ಕೂಡ ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.
ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಅವರು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತಾರೆ. ನನ್ನನ್ನು ಕರೆದರೆ ಹೋಗುತ್ತೇನೆ ಎಂದು ಡಿಕೆ ತಿಳಿಸಿದ್ದಾರೆ.
