HomeLatest NewsBREAKING: ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಡಿಸಿಎಂ ಡಿಕೆ ಮಹತ್ವದ ಹೇಳಿಕೆ

BREAKING: ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಡಿಸಿಎಂ ಡಿಕೆ ಮಹತ್ವದ ಹೇಳಿಕೆ

ನವದೆಹಲಿ: ನಾಯಕತ್ವ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನಾಗಲಿ ಸಿದ್ದರಾಮಯ್ಯ ಅವರಾಗಲಿ ಚರ್ಚೆ ಮಾಡಿಲ್ಲ. ಹೈಕಮಾಂಡ್ ಮಟ್ಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ, ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನ್ಯಾಕೆ ರಾಜೀನಾಮೆ ಕೊಡಲಿ ಎಂದು ಹೇಳಿದ ಅವರು, ಪಕ್ಷಕ್ಕೆ ನಾನು ಪಕ್ಷಕ್ಕೆ ಯಾವತ್ತೂ ಬ್ಲಾಕ್ ಮೇಲ್ ಮಾಡಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದೇನೆ. ಪಕ್ಷ ವಹಿಸಿರುವ ಕೆಲಸವನ್ನು ಮಾಡುತ್ತೇನೆ. ಪಕ್ಷ ಹೇಳುವವರೆಗೂ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಯಾರೂ ಕೂಡ ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ಪುನಾರಚನೆ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಅವರು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತಾರೆ. ನನ್ನನ್ನು ಕರೆದರೆ ಹೋಗುತ್ತೇನೆ ಎಂದು ಡಿಕೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular