ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದಿದ್ದಾರೆ. ಬಿಜೆಪಿಯವರು ಮಹಾಭಾರತ ನಾಟಕವನ್ನೇ ತೋರಿಸಿದ್ದಾರೆ ಎಂದರು. ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ನಾಯಕರ ಬೆಂಬಲ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ನಿಲುವೇನು ಅಂತಾ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್.ಡಿ.ದೇವೇಗೌಡರು ತಮ್ಮ ನಿಲುವು ಏನು ಅಂತಾ ಹೇಳಲಿ, ಈ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಮಾತ್ರ ಮಾತನಾಡಿದ್ದಾರೆ ಎಂದರು.

ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ : ಆರ್ ಅಶೋಕ್

ಸ್ಪೀಕರ್ ಪೀಠಕ್ಕೆ ಯು.ಟಿ. ಖಾದರ್ ಅಗೌರವ ತೋರಿದ್ದಾರೆ. ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ ಎಂದು ಶಾಸಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೇವು ಎಂದರು.
ಪ್ರಶ್ನೆ ಮಾಡಿದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read