ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ (RSS) ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ.
ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಆನ್ಲೈನ್ನಲ್ಲಿ ವ್ಯಾಪಕವಾಗಿ ವೀಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದರು.
”ಡಿಕೆ ಶಿವಕುಮಾರ್ ಏನು ಎಂದು ಕಾಂಗ್ರೆಸ್ ಗೆ ಗೊತ್ತಿದೆ. ನನಗೆ ನನ್ನ ಧರ್ಮದ ಬಗ್ಗೆ ಗೌರವವಿದೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಈ ಮೂರು ಧರ್ಮದ ಬಗ್ಗೆ ನನಗೆ ಗೌರವವಿದೆ. ನಾನು ಹರಿಪ್ರಸಾದ್ ಗೋಸ್ಕರ ಕ್ಷಮೆ ಕೇಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
Bengaluru: On reciting the RSS anthem in the Karnataka Assembly, he says, "…I just commented and tried to pull their (BJP) leg. Some of my friends are taking a political leap, trying to misuse it and cause confusion among the public… I don't want to hurt their feelings. If… pic.twitter.com/5KZrenviw8
— ANI (@ANI) August 26, 2025
ಇತ್ತೀಚೆಗೆ ಆರ್ಸಿಬಿ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದ ಕುರಿತಾದ ಚರ್ಚೆಗಳ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿತು. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ.
‘RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಲ್ ಸಿ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದರು.ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು, ಅದು ಸರಿಯಲ್ಲ. ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.ಅವರು ಉಪಮುಖ್ಯಮಂತ್ರಿಯಾಗಿ ಹೇಳಿದ್ದರೆ ತಪ್ಪಿಲ್ಲ, ಆದರೆ ಅವರು ಕೆಪಿಸಿಸಿ ಪಕ್ಷದ ಅಧ್ಯಕ್ಷರಾಗಿ ಆರ್ ಎಸ್ ಎಸ್ ಗೀತೆ ಹೇಳಿದ್ದಾರೆ. ಇದು ತಪ್ಪು ಎಂದರು..
VIDEO | Karnataka Deputy CM DK Shivakumar (@DKShivakumar) recited the RSS’ Sangha Prarthana, ‘Namaste Sada Vatsale Matribhume’, while addressing the Assembly yesterday.
— Press Trust of India (@PTI_News) August 22, 2025
(Source: Third party)
(Full VIDEO available on PTI Videos – https://t.co/n147TvrpG7) pic.twitter.com/2CNsemZaq4