ಹಿರಿಯ ನಟಿ ಲೀಲಾವತಿ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ತಿಳಿಸಿದ್ದಾರೆ.

https://twitter.com/DKShivakumar/status/1733107159012143245

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read