HomeLatest NewsBIG NEWS : ಉಪಮುಖ್ಯಮಂತ್ರಿ 'ಅಜಿತ್ ಪವಾರ್' ನಿಧನಕ್ಕೆ DCM ಡಿ.ಕೆ ಶಿವಕುಮಾರ್ ಸಂತಾಪ.!

BIG NEWS : ಉಪಮುಖ್ಯಮಂತ್ರಿ ‘ಅಜಿತ್ ಪವಾರ್’ ನಿಧನಕ್ಕೆ DCM ಡಿ.ಕೆ ಶಿವಕುಮಾರ್ ಸಂತಾಪ.!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಇಂದು ನಡೆದಂತಹ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಪುಣೆ ಜಿಲ್ಲೆಯ ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ತುರ್ತು ಲ್ಯಾಂಡಿಂಗ್ (Emergency Landing) ಮಾಡಲು ಪ್ರಯತ್ನಿಸಿದಾಗ ಅಪಘಾತಕ್ಕೀಡಾಗಿದೆ.

ವಿಮಾನವು ರನ್ವೇಯಲ್ಲಿ ಇಳಿಯುವಾಗ ನಿಯಂತ್ರಣ ತಪ್ಪಿ ಬೆಂಕಿ ಹತ್ತಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ಆಳವಾದ ನೋವುಂಟಾಗಿದೆ. ಅವರ ಹಠಾತ್ ನಿಧನವು ಸಾರ್ವಜನಿಕ ಜೀವನಕ್ಕೆ ಮತ್ತು ದೃಢ ಸಂಕಲ್ಪ ಹಾಗೂ ಅನುಭವದೊಂದಿಗೆ ಅವರು ಸೇವೆ ಸಲ್ಲಿಸಿದ ಮಹಾರಾಷ್ಟ್ರ ರಾಜಕಾರಣಕ್ಕೆ ದೊಡ್ಡ ನಷ್ಟವಾಗಿದೆ.ಅವರ ಕುಟುಂಬ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ದುಃಖದ ಸಮಯದಲ್ಲಿ ಅವರಿಗೆ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.” ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅಜಿತ್ ಪವಾರ್ ಅವರು ಎನ್ಸಿಪಿ (NCP) ಪಕ್ಷದ ಪ್ರಮುಖ ನಾಯಕರಾಗಿದ್ದು, ಪ್ರಸ್ತುತ ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರ ದರ್ಶನಕ್ಕಾಗಿ ಮುಂಬೈನ ಎನ್ಸಿಪಿ (NCP) ಕಚೇರಿ ಅಥವಾ ಅವರ ಅಧಿಕೃತ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular