ಬೆಂಗಳೂರು : ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ , ಹಿರಿಯ ನಟಿ ಶಬಾನಾ ಆಜ್ಮಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ.
ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್, ಹಿರಿಯ ನಟಿ ಶಬಾನಾ ಆಜ್ಮಿ ಅವರು ನನ್ನನ್ನು ಸ್ವಗೃಹದಲ್ಲಿ ಇಂದು ಭೇಟಿಯಾದರು. 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಕ್ಕೆ ಶಬಾನಾ ಆಜ್ಮಿ ಅವರನ್ನು ಅಭಿನಂದಿಸಿದೆ. ಅಖ್ತರ್ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಿದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.