ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಮೂರ್ತಿ ಕುನ್ಹಾ ವರದಿ ಪರಿಶೀಲಿಸುತ್ತಿದ್ದು, ಸಾಂಕ್ರಾಮಿಕ ಕಾಲದಲ್ಲಿ ನಡೆದ ಅಕ್ರಮಗಳ ವಿವರ ನೋಡಿ ನನಗೆ ಗಾಬರಿಯಾಗಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

ಕುನ್ಹಾ ಅವರು ಸಲ್ಲಿಸಿರುವ ಭಾಗಶಃ ವರದಿ ಆಧರಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಿದ ಸಚಿವ ಸಂಪುಟ ಉಪ ಸಮಿತಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿದ್ದಾರೆ. ಕುನ್ಹಾ ಅವರ ನೇತೃತ್ವದ ತನಿಖಾ ಆಯೋಗ ನೀಡಿದ ವರದಿ ಗಮನಿಸಿದ್ದೇನೆ. ವರದಿಯಲ್ಲಿನ ಅಂಶಗಳನ್ನು ನೋಡಿದರೆ ನನಗೆ ಕೋವಿಡ್ ಬರುವಂತೆ ಕಾಣುತ್ತಿದೆ. ವರದಿಯಿಂದಲೇ ಕೊರೋನಾ ಹರಡುವಂತಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read