ವಸತಿ ರಹಿತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್..!

ಚನ್ನಪಟ್ಟಣ : ಸೈಟ್ ಇಲ್ಲದವರಿಗೆ ಸೈಟ್ ಹಾಗೂ ಮನೆ ಇಲ್ಲದವರಿಗೆ ಮನೆ ಕೊಡಿಸುವ ಕಾರ್ಯಕ್ರಮವನ್ನು ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನನ್ನದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಚನ್ನಪಟ್ಟಣದ ಮಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು.

ಜನರನ್ನು ಸರ್ಕಾರವೇ ನೇರವಾಗಿ ಈ ಕಾರ್ಯಕ್ರಮದಡಿ ಸಂಪರ್ಕಿಸುತ್ತಿದೆ. ಪ್ರತಿನಿತ್ಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ಕಡಿಮೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈಗಾಗಲೇ ಚನ್ನಪಟ್ಟಣದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಎಲ್ಲರಿಗೂ ಪರಿಹಾರ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಈ ಭಾಗದ ಜನರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ನಮ್ಮ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ನಿಮ್ಮ ಸೇವೆಗೆ ಲಭ್ಯರಿರುತ್ತಾರೆ. ಚನ್ನಪಟ್ಟಣದಲ್ಲಿ ಸೈಟ್ ಇಲ್ಲದವರಿಗೆ ಸೈಟ್ ಹಾಗೂ ಮನೆ ಇಲ್ಲದವರಿಗೆ ಮನೆ ಕೊಡಿಸುವ ಕಾರ್ಯಕ್ರಮವನ್ನು ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನನ್ನದು. ಜನಸಾಮಾನ್ಯರ ಸೇವೆಗೆ ನಮ್ಮ ಸರ್ಕಾರ ಸದಾ ಸಿದ್ಧವಾಗಿದ್ದು, ಜನರ ಕಲ್ಯಾಣವೇ ನಮ್ಮ ಕಾಳಜಿಯಾಗಿದೆ ಎಂದು ಅವರು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read