HomeKarnatakaಹೊಸ ವರ್ಷಾಚರಣೆ ಹಿನ್ನೆಲೆ ಜ. 3ರವರೆಗೆ ಅಧಿಕಾರಿಗಳು, ಸಿಬ್ಬಂದಿಗೆ ರಜೆ ಇಲ್ಲ: ಕರ್ತವ್ಯಕ್ಕೆ ಹಾಜರಾಗಲು ಡಿಸಿಎಂ...

ಹೊಸ ವರ್ಷಾಚರಣೆ ಹಿನ್ನೆಲೆ ಜ. 3ರವರೆಗೆ ಅಧಿಕಾರಿಗಳು, ಸಿಬ್ಬಂದಿಗೆ ರಜೆ ಇಲ್ಲ: ಕರ್ತವ್ಯಕ್ಕೆ ಹಾಜರಾಗಲು ಡಿಸಿಎಂ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸೇರಿದಂತೆ ನಗರ ವ್ಯಾಪ್ತಿಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ಮೇಲೆ ತೆರಳದೇ ನಗರದಲ್ಲಿಯೇ ಇರುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.

ಜನವರಿ 3ರವರೆಗೆ ಹೊಸ ವರ್ಷದ ಸಂಭ್ರಮಾಚರಣೆ ಇರಲಿದ್ದು, ಎಲ್ಲಾ ವ್ಯವಸ್ಥೆಯನ್ನು ಜಾಗರೂಕತೆಯಿಂದ ಮಾಡಿ ಜನರಿಗೆ ಸೇವೆ ನೀಡಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ, ಜಲ ಮಂಡಳಿ, ಬೆಸ್ಕಾಂ ಸೇರಿದಂತೆ ಎಲ್ಲಾ ವಿಭಾಗದ ಅಧಿಕಾರಿಗಳು ಕರ್ತವ್ಯದಲ್ಲಿ ಹಾಜರಿರಬೇಕು. ರಜೆ ಪಡೆಯದೆ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕೆಲಸ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular