BREAKING : ಹಿರಿಯ ನಟಿ ಲೀಲಾವತಿ ಕನಸಿನ ‘ಪಶು ಆಸ್ಪತ್ರೆ’ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಬಹಳ ಹತ್ತಿರವಾದ ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಉದ್ಘಾಟಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಇದಕ್ಕೆ ಇತ್ತೀಚೆಗೆ ಗ್ರೀನ್ ಸಿಗ್ನಲ್ ನೀಡಿತ್ತು.ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು.  ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಹೊರಡಿಸಿತ್ತು.

ನಟಿ ಲೀಲಾವತಿ ಹಾಗೂ ಅವರ ಪುತ್ರ ವಿನೋದ್ ರಾಜ್ ಕುಮಾರ್ ಸ್ವಂತ ಖರ್ಚಿನಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಿದ್ದರು. ಅಂತೂ ಇಂದು ಲೀಲಾವತಿ ಕನಸು ನನಸಾಗಿದೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಗೆ ನೆಲಮಂಗಲ ಕ್ಷೇತ್ರದ ಶಾಸಕ ಎನ್ ‍ಶ್ರೀನಿವಾಸ್ ಸೇರಿದಂತೆ ಹಲವರು ಸಾಥ್ ನೀಡಿದರು.

ಇದಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅನೇಕ ನಟ, ಗಣ್ಯರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ನಟ ದರ್ಶನ್, ಧ್ರುವ ಸರ್ಜಾ ಸೇರಿದಂತೆ ಹಲವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read